ADVERTISEMENT

ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರದ ನೆರವು ಬೇಕು

​ಪ್ರಜಾವಾಣಿ ವಾರ್ತೆ
Published 10 ಜೂನ್ 2011, 19:30 IST
Last Updated 10 ಜೂನ್ 2011, 19:30 IST

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ಉತ್ಪನ್ನಗಳ ರಫ್ತಿನ ಮೂಲಕ ದೇಶಕ್ಕೆ ಜಾಗತಿಕ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿರುವ ಬೆಂಗಳೂರಿನಂಥ ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಣಕಾಸಿನ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒತ್ತಾಯಿಸಿದರು.

12ನೇ ಪಂಚವಾರ್ಷಿಕ ಯೋಜನೆಯ ಕುರಿತು ದಕ್ಷಿಣ ಭಾರತದ ರಾಜ್ಯಗಳೊಂದಿಗೆ ಕೇಂದ್ರ ಯೋಜನಾ ಆಯೋಗ ಇಲ್ಲಿ ಶುಕ್ರವಾರ ನಡೆಸಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, `ಕೇಂದ್ರ ಸರ್ಕಾರದಿಂದ ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ಯಾವುದೇ ನೆರವು ದೊರೆಯದ ಕಾರಣ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರಗಳೇ ಹಣ ಹೂಡಬೇಕಾಗಿದೆ~ ಎಂದು ಹೇಳಿದರು.
 
ಇತ್ತೀಚಿನ ವರ್ಷಗಳಲ್ಲಿ ಐಟಿ ಉತ್ಪನ್ನಗಳು ಭಾರಿ ಪ್ರಮಾಣದಲ್ಲಿ ರಫ್ತಾಗುತ್ತಿವೆ. ಬೆಂಗಳೂರಿನಿಂದ ರಫ್ತಾಗುವ ಐಟಿ ಉತ್ಪನ್ನಗಳು ದೇಶದ ಖಜಾನೆಗೆ 14 ಶತಕೋಟಿ ಡಾಲರ್ ಹಣ ತರುತ್ತಿವೆ. ಇಂಥ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಸಿಗಬೇಕು ಎಂದು  ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.