ADVERTISEMENT

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2012, 19:42 IST
Last Updated 28 ನವೆಂಬರ್ 2012, 19:42 IST
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕುರಿತು ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷೆ ತಾರಾ ಮಾತನಾಡಿದರು. ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಬಸವರಾಜು ಚಿತ್ರದಲ್ಲಿದ್ದಾರೆ
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕುರಿತು ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷೆ ತಾರಾ ಮಾತನಾಡಿದರು. ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಬಸವರಾಜು ಚಿತ್ರದಲ್ಲಿದ್ದಾರೆ   

ಬೆಂಗಳೂರು:  `ಐದನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಡಿ. 20 ರಿಂದ ಆರಂಭವಾಗಲಿದೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಬಸವರಾಜು ಹೇಳಿದರು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕುರಿತು ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಉದ್ಘಾಟನಾ ಸಮಾರಂಭವು ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಉದ್ಘಾಟನೆಯಂದು ನೆದರ್‌ಲೆಂಡ್‌ನ ಬೌದೆವಿನ್ ಕೂಲ್ ನಿರ್ದೇಶನದ `ಕೌಬಾಯ್~ ಚಲನಚಿತ್ರವು ಪ್ರದರ್ಶನಗೊಳ್ಳಲಿದೆ. ಚಿತ್ರೋತ್ಸವದಲ್ಲಿ 50 ಕ್ಕೂ ಹೆಚ್ಚು ದೇಶಗಳ 160 ಚಿತ್ರಗಳು ಪ್ರದರ್ಶನಗೊಳ್ಳಲಿವೆ~ ಎಂದು ತಿಳಿಸಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆ ತಾರಾ ಮಾತನಾಡಿ, `ಭಾರತೀಯ ಸಿನೆಮಾ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಡಿ.21 ರಂದು ವಾರ್ತಾ ಇಲಾಖೆಯ ಸುಲೋಚನಾ ಸಭಾಂಗಣದಲ್ಲಿ ನಡೆಯಲಿದೆ. ಹಳೆಯ ಚಿತ್ರೀಕರಣದ ಉಪಕರಣಗಳು, ಅಂಚೆಚೀಟಿಗಳು ಹಾಗೂ ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ~ ಎಂದರು.

ADVERTISEMENT

`ಕನ್ನಡ ಚಲನಚಿತ್ರಗಳ ಸ್ಪರ್ಧೆಗೆ ಪ್ರವೇಶ ಪತ್ರವನ್ನು ಸ್ವೀಕರಿಸಲು ನ.30 ರವರೆಗೆ ಅವಕಾಶವಿದೆ. ಜತೆಗೆ ಕೊಂಕಣಿ, ಕೊಡವ, ತುಳು ಭಾಷೆಯ ಚಿತ್ರಗಳನ್ನು ಪ್ರದರ್ಶಿಸುವ ಬಗ್ಗೆಯೂ ನಿರ್ಧರಿಸಲಾಗುವುದು~ ಎಂದು ತಿಳಿಸಿದರು.

ಪ್ರತಿನಿಧಿಗಳ ನೋಂದಣಿ: ಪ್ರತಿನಿಧಿಗಳ ನೋಂದಣಿ ಕಾರ್ಯವು ನಾಲ್ಕು ಕೇಂದ್ರಗಳಲ್ಲಿ ನಡೆಯಲಿದೆ. ಭಗವಾನ್ ಮಹಾವೀರ ರಸ್ತೆಯ ವಾರ್ತಾ ಸೌಧ. ಎನ್.ಆರ್. ಚೌಕದ ಬಾದಾಮಿ ಹೌಸ್, ಬನಶಂಕರಿ 2 ನೇ ಹಂತದ ಸುಚಿತ್ರಾ ಫಿಲಂ ಸೊಸೈಟಿ, ಶೇಷಾದ್ರಿಪುರದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪ್ರತಿನಿಧಿಗಳ ನೋಂದಣಿ ಕಾರ್ಯವು  ಡಿ. 1 ರಂದು ನಡೆಯಲಿದೆ.

ಮಾಹಿತಿಗೆ ಸಂಪರ್ಕಿಸಿ: ಚಲನಚಿತ್ರೋತ್ಸವದ ವೆಬ್‌ಸೈಟ್: www.biffes.com ಅಥವಾ ದೂರವಾಣಿ ಸಂಖ್ಯೆ-2213 3410 /2213 3441.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.