ADVERTISEMENT

ಬೆಟ್ಟಿಂಗ್‌ಗೆ ಅನ್ಯರ ಹೆಸರಲ್ಲಿ ಸಿಮ್‌

ಇಬ್ಬರ ಬಂಧನ; ₹1.10 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 19:14 IST
Last Updated 23 ಏಪ್ರಿಲ್ 2018, 19:14 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ಪಂದ್ಯಗಳ ವೇಳೆ ಬೆಟ್ಟಿಂಗ್‌ ಆಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಹನುಮಂತನಗರದ ಅಕ್ಷಯ್‌ಕುಮಾರ್‌ (25) ಹಾಗೂ ವಿಜಯನಗರದ ಗೌತಮ್ ಜೈನ್ (24) ಬಂಧಿತರು. ಅವರಿಂದ ₹1.10 ಲಕ್ಷ ನಗದು ಹಾಗೂ ನಾಲ್ಕು ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ.

ಬ್ಯಾಟರಾಯನಪುರ ಸಮೀಪದ ಗಿರಿನಗರದ 50 ಅಡಿ ರಸ್ತೆಯಲ್ಲಿರುವ ಕೊಠಡಿಯೊಂದರಲ್ಲಿ ನೆಲೆಸಿದ್ದ ಆರೋಪಿಗಳು, ಅಲ್ಲಿಯೇ ಬೆಟ್ಟಿಂಗ್‌ ಪರಿಕರಗಳನ್ನು ಇಟ್ಟುಕೊಂಡಿದ್ದರು ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ADVERTISEMENT

‘ಬೇರೆಯವರ ಹೆಸರಿನ ದಾಖಲೆಗಳನ್ನು ಬಳಸಿಕೊಂಡು ಆರೋಪಿಗಳು, ಸಿಮ್‌ ಕಾರ್ಡ್‌ ಖರೀದಿ ಮಾಡಿದ್ದರು. ಬೆಟ್ಟಿಂಗ್‌ ಕಟ್ಟುತ್ತಿದ್ದವರ ಜತೆ ಅದೇ ಸಿಮ್‌ ಕಾರ್ಡ್‌ ಬಳಸಿ ಸಂಪರ್ಕ ಸಾಧಿಸುತ್ತಿದ್ದರು. ಪ್ರತಿ ಪಂದ್ಯದ ವೇಳೆಯಲ್ಲಿ ₹5 ಸಾವಿರದಿಂದ ₹25 ಸಾವಿರದವರೆಗೂ ಬೆಟ್ಟಿಂಗ್‌ ಕಟ್ಟಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಕೊಠಡಿ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆವು’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.