ADVERTISEMENT

ಬೈಕ್‌ಗೆ ಟೆಂಪೊ ಡಿಕ್ಕಿ: ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2014, 19:30 IST
Last Updated 13 ಮಾರ್ಚ್ 2014, 19:30 IST

ಬೆಂಗಳೂರು: ಬೈಕ್‌ಗೆ ಟೆಂಪೊ ಡಿಕ್ಕಿ ಹೊಡೆದು ಲಾವಣ್ಯ (8) ಎಂಬ ಬಾಲಕಿ ಸಾವನ್ನಪ್ಪಿರುವ ಘಟನೆ ಲಗ್ಗೆರೆಯಲ್ಲಿ ಗುರುವಾರ ನಡೆದಿದೆ.
ರಾಜೇಶ್ವರಿನಗರ ನಿವಾಸಿ ಹೊನ್ನೇಶ್‌ ಅವರ ಪುತ್ರಿ ಲಾವಣ್ಯ ಲಗ್ಗೆರೆಯ ಅಶ್ವಿನಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊನ್ನೇಶ್‌ ಅವರು ಮಗಳನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಲಗ್ಗೆರೆ ಮುಖ್ಯರಸ್ತೆ ಕಡೆಗೆ ಹೋಗು­ತ್ತಿದ್ದಾಗ ವೇಗವಾಗಿ ಬಂದ ಟೆಂಪೊ ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತ­ದಲ್ಲಿ ಬಾಲಕಿ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಟೆಂಪೊ ಚಾಲಕ ರಾಮಣ್ಣ ಎಂಬುವರಿಗೆ ಸ್ಥಳೀಯರು ಥಳಿಸಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಗಾಯಗೊಂಡಿರುವ ಹೊನ್ನೇಶ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.