ADVERTISEMENT

ಬೈಕ್ ಡಿಕ್ಕಿ: ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2011, 20:20 IST
Last Updated 22 ಅಕ್ಟೋಬರ್ 2011, 20:20 IST

ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ನಗರದ ಬಳ್ಳಾರಿ ರಸ್ತೆಯ ಸಶಸ್ತ್ರ ಪೊಲೀಸ್ ತರಬೇತಿ ಶಾಲೆ ಬಳಿ ಶನಿವಾರ ರಾತ್ರಿ ನಡೆದಿದೆ.

ಯಲಹಂಕ ಸಮೀಪದ ವಿನಾಯಕನಗರ ನಿವಾಸಿ ಕಟವಯ್ಯ (55) ಮೃತಪಟ್ಟವರು. ಅವರು ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಗುಮಾಸ್ತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ ಎಂಟು ಗಂಟೆ ಸುಮಾರಿಗೆ ಮನೆಗೆ ಬರುತ್ತಿದ್ದ ಅವರು ಎಪಿಟಿಎಸ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಸವಾರ ನಿಯಂತ್ರಣ ತಪ್ಪಿ ಅವರಿಗೆ ವಾಹನ ಗುದ್ದಿಸಿದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.