ADVERTISEMENT

ಬ್ಯಾಂಕ್ ಅಧಿಕಾರಿಗೆ ಒಂದು ವರ್ಷ ಸಜೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2013, 19:59 IST
Last Updated 2 ಆಗಸ್ಟ್ 2013, 19:59 IST

ಬೆಂಗಳೂರು: ಅವ್ಯವಹಾರ ನಡೆಸಿ ಬ್ಯಾಂಕ್‌ಗೆ ನಷ್ಟ ಉಂಟುಮಾಡಿರುವ ಅಪರಾಧಕ್ಕಾಗಿ ಭಾರತೀಯ ಸ್ಟೇಟ್ ಬ್ಯಾಂಕ್‌ನ ಜಾಲಹಳ್ಳಿ ಶಾಖೆಯ ಹಿಂದಿನ ಕ್ಷೇತ್ರಾಧಿಕಾರಿ ಎಂ.ರವೀಂದ್ರನಾಥ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30 ಸಾವಿರ ರೂಪಾಯಿ ದಂಡ ವಿಧಿಸಿದೆ.

ನಕಲಿ ಸಾಲ ವಿತರಣಾ ಪತ್ರಗಳನ್ನು ಸೃಷ್ಟಿಸಿ ಬ್ಯಾಂಕ್‌ಗೆ  ರೂ 2.30 ಲಕ್ಷ ನಷ್ಟ ಉಂಟುಮಾಡಿದ್ದ ಆರೋಪ ರವೀಂದ್ರನಾಥ್ ಮೇಲಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ಅಧಿಕಾರಿಗಳು, ತನಿಖೆ ನಡೆಸಿದ್ದರು. 1992ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು.

1998ರಿಂದ ತಲೆ ಮರೆಸಿಕೊಂಡಿದ್ದ ರವೀಂದ್ರನಾಥ್ ಅವರನ್ನು ಸಿಬಿಐ ಪೊಲೀಸರು 14 ವರ್ಷಗಳ ಬಳಿಕ ಪತ್ತೆಮಾಡಿದ್ದರು. 2012ರ ಡಿಸೆಂಬರ್‌ನಿಂದ ಮತ್ತೆ ಪ್ರಕರಣದ ವಿಚಾರಣೆ ಆರಂಭವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.