ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬಹುತೇಕ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಲೆದೋರಿದ್ದು, ಬೆಂಗಳೂರು ಜಲ ಮಂಡಳಿ ಹಾಗೂ ಪಾಲಿಕೆ ಅಧಿಕಾರಿಗಳು ಕೇವಲ ಪೊಳ್ಳು ಭರವಸೆಗಳನ್ನು ನೀಡುತ್ತಿರುವುದನ್ನು ಬಿಟ್ಟರೆ ಸಮಸ್ಯೆಯನ್ನು ಬಗೆಹರಿಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಶಾಸಕ ಕೃಷ್ಣಬೈರೇಗೌಡ ಆರೋಪಿಸಿದರು.
ಥಣಿಸಂದ್ರ ವಾರ್ಡ್ ವ್ಯಾಪ್ತಿಯ ನಾಗವಾರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, `ಹೊಸದಾಗಿ ಬಿಬಿಎಂಪಿಗೆ ಸೇರ್ಪಡೆಯಾಗಿರುವ ಪ್ರದೇಶಗಳಲ್ಲಿ ಶೇಕಡಾ 70ರಷ್ಟು ಜನರು ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳನ್ನು ಅವಲಂಬಿಸಿರುವ ಹಿನ್ನೆಲೆಯಲ್ಲಿ ಪ್ರತಿ ವಾರ್ಡಿಗೆ 25 ಲಕ್ಷ ಅನುದಾನ ಸಾಕಾಗುವುದಿಲ್ಲ.
ಕನಿಷ್ಠ 50 ಲಕ್ಷ ರೂಪಾಯಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಪಾಲಿಕೆ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.
ಮಾಜಿ ನಗರಸಭಾ ಸದಸ್ಯರಾದ ಟಿ.ರಮೇಶ್, ನಾಗರಾಜ್, ಪಾರ್ವತಮ್ಮ, ಮಾಜಿ ಗ್ರಾ.ಪಂ.ಅಧ್ಯಕ್ಷ ಡಿ.ಬಿ.ಸುರೇಶ್ ಮೊದಲಾದವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.