ADVERTISEMENT

ಭಾಗ್ಯಲಕ್ಷ್ಮಿ ಯೋಜನೆ: ಭ್ರೂಣ ಹತ್ಯೆ ಕಡಿಮೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2011, 19:10 IST
Last Updated 11 ಮಾರ್ಚ್ 2011, 19:10 IST

ಕೃಷ್ಣರಾಜಪುರ: ‘ಭಾಗ್ಯಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ಹೆಣ್ಣು ಭ್ರೂಣ ಹತ್ಯೆ ಪ್ರಮಾಣ ಕಡಿಮೆಯಾಗಿದೆ’ ಎಂದು ಶಾಸಕ ಎನ್.ಎಸ್.ನಂದೀಶ್ ರೆಡ್ಡಿ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪೈ ಬಡಾವಣೆಯಲ್ಲಿರುವ ಶಾಸಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಒಟ್ಟು 614 ಫಲಾನುಭವಿಗಳನ್ನು ಗುರುತಿಸಲಾಗಿದೆ. ವಿವಿಧ ವಾರ್ಡುಗಳಿಗೆ ಸಂಬಂಧಿಸಿದಂತೆ 213ಕ್ಕೂ ಹೆಚ್ಚು ಫಲಾನುಭವಿಗಳಿಗೆ ಬಾಂಡು ಮತ್ತು ಸೀರೆಗಳನ್ನು ವಿತರಿಸಲಾಗಿದೆ. ಈಗಾಗಲೇ ಬಾಂಡುಗಳನ್ನು ಪಡೆದ 100ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೀರೆಗಳನ್ನು ವಿತರಿಸಲಾಗಿದೆ ಎಂದರು.ವಾರ್ಡ್ ಸದಸ್ಯೆ ಮಂಜುಳಾ ದೇವಿ ಅವರು ಮಕ್ಕಳಿಗಾಗಿ ಉಚಿತ ವೈದ್ಯಕೀಯ ತಪಾಸಣೆ ಕಾರ್ಯಕ್ರಮವನ್ನು ಅಲ್ಲಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಮಗುವಿನ ಪಾಲಕರು ಇದರ ಸದುಪಯೋಗ ಪಡೆಯಬೇಕು ಎಂದರು.

ಮಕ್ಕಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಶೋಭಾ, ವಿವಿಧ ವಾರ್ಡುಗಳ ಸದಸ್ಯರಾದ ಎನ್.ವೀರಣ್ಣ, ಸಿದ್ದಲಿಂಗಯ್ಯ ಮಾತನಾಡಿದರು.ಮುಖಂಡರಾದ ತಾಯಣ್ಣ, ಶಿವರಾಜ್, ಬಿ.ಎಚ್.ಗಣೇಶ ರೆಡ್ಡಿ, ಶಾಂತರಾಜ ಅರಸು, ಅಶೋಕ್, ಕೇಶವಮೂರ್ತಿ, ಭಾರತಿ ದೇವಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.