
ಪ್ರಜಾವಾಣಿ ವಾರ್ತೆಮಹದೇವಪುರ: ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯನ್ನು ಮತ್ತಷ್ಟು ಸದೃಢವಾಗಿ ಬೆಳೆಸಲು ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕಿದೆ ಎಂದು ವರ್ತೂರು ವಾರ್ಡ್ ಬಿಬಿಎಂಪಿ ಸದಸ್ಯ ಎಸ್. ಉದಯಕುಮಾರ್ ಹೇಳಿದರು.
ಕ್ಷೇತ್ರದ ವರ್ತೂರು ಗ್ರಾಮದ ಗಾಂಧಿ ವೃತ್ತದಲ್ಲಿ ಇತ್ತೀಚೆಗೆ ಅಖಿಲ ಕರ್ನಾಟಕ ದಲಿತ ಜಾಗೃತಿ ವೇದಿಕೆ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ದಲಿತ ಜಾಗೃತಿ ವೇದಿಕೆಯ ಅಧ್ಯಕ್ಷ ವರ್ತೂರು ವೆಂಕಟೇಶ ಮೊದಲಾದವರು ಉಪಸ್ಥಿತರಿದ್ದರು.
ಕಲಾವಿದೆ ಐಶ್ವರ್ಯ, ನಿರ್ಮಾಪಕಿ ಲಕ್ಷ್ಮೀ ಮೊದಲಾದವರನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.