ADVERTISEMENT

ಭೂಮಿಗೆ ಒತ್ತಾಯ: ಇಂದಿನಿಂದ ರೈತರ ಧರಣಿ

​ಪ್ರಜಾವಾಣಿ ವಾರ್ತೆ
Published 19 ಮೇ 2012, 20:05 IST
Last Updated 19 ಮೇ 2012, 20:05 IST

ಬೆಂಗಳೂರು: `ಬಡವರಿಗೆ ನಿವೇಶನ ಮತ್ತು ರೈತರಿಗೆ ಭೂಮಿ ನೀಡುವಂತೆ ಒತ್ತಾಯಿಸಿ ಭಾನುವಾರ (ಮೇ 21) ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತರು ಮತ್ತು ಕೃಷಿ ಕೂಲಿಕಾರರಿಂದ ಅನಿರ್ಧಿಷ್ಟ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು `ಅಂದು ಮಧ್ಯಾಹ್ನ 12 ಗಂಟೆಗೆ ನಗರದ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಮೂಲಕ ಸ್ವಾತಂತ್ರ್ಯ ಉದ್ಯಾನವನಕ್ಕೆ ಆಗಮಿಸಿ ಅಲ್ಲಿ ಧರಣಿ ನಡೆಯಲಿದೆ. ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು ಆಗಮಿಸುವ ರೈತರು ಭಾಗವಹಿಸುವರು~ ಎಂದು ತಿಳಿಸಿದರು. `1961ರ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿರುವ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಕೂಡಲೇ ಇದನ್ನು ಕೈಬಿಡಬೇಕು. ಇದರಿಂದಾಗಿ ಸಾವಿರಾರು ರೈತರು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ  ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಬಯ್ಯಾರೆಡ್ಡಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.