ADVERTISEMENT

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ರಾಷ್ಟ್ರಪತಿ ಅಂಕಿತ?

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2017, 19:52 IST
Last Updated 24 ಅಕ್ಟೋಬರ್ 2017, 19:52 IST

ಬೆಂಗಳೂರು: ಕಂದಾಯರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿದ ಬಳಿಕ ಅಲ್ಲಿ ವಾಸಿಸುವವರಿಗೆ ಮನೆ ಹಕ್ಕುಪತ್ರ ನೀಡುವ ‘ವಾಸಿಸುವವನೇ ಮನೆಯೊಡೆಯ’ ಮಹತ್ವದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ ಎನ್ನಲಾಗಿದೆ.

ಈ ಮಸೂದೆ ಅನ್ವಯ, ಕಂದಾಯ ಗ್ರಾಮಗಳಾಗಿ ಘೋಷಣೆಯಾದ ಬೆನ್ನಲ್ಲೆ, ಗೊಲ್ಲರ ಹಟ್ಟಿ, ಲಂಬಾಣಿ ತಾಂಡಾ, ವಡ್ಡರ ಹಟ್ಟಿ, ಕುರುಬರ ಹಟ್ಟಿ, ನಾಯಕರ ಹಟ್ಟಿ, ಮಜರೆ ಗ್ರಾಮ, ದೊಡ್ಡಿ, ಪಾಳ್ಯ, ಕ್ಯಾಂಪ್‌, ಗೌಳಿ ದೊಡ್ಡಿ, ಕಾಲೊನಿಯಂಥ ದಾಖಲೆರಹಿತ ಜನವಸತಿಗಳ ಜನರು, ವಾಸಿಸುವ ನೆಲದ ಮಾಲೀಕತ್ವ ಪಡೆಯಲಿದ್ದಾರೆ. ಸರ್ಕಾರದ ಎಲ್ಲ ಸವಲತ್ತುಗಳಿಗೆ ಅರ್ಹರಾಗುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT