ADVERTISEMENT

‘ಮಕ್ಕಳಲ್ಲಿ ಕ್ರೀಡಾಸಕ್ತಿ ವೃದ್ಧಿಸಿ’

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2018, 19:19 IST
Last Updated 3 ಮಾರ್ಚ್ 2018, 19:19 IST

ಹೊಸಕೋಟೆ: ಆರೋಗ್ಯವಂತರಾಗಿರಲು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಕೊಳ್ಳುವುದು ಅಗತ್ಯ. ಆ ನಿಟ್ಟಿನಲ್ಲಿ ಮಕ್ಕಳಲ್ಲಿ ಕ್ರೀಡಾಸಕ್ತಿಯನ್ನು ಪೋಷಕರು ವೃದ್ಧಿಸ
ಬೇಕು ಎಂದು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಹೇಳಿದರು.

ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ತಾಲ್ಲೂಕಿನ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಕ್ರೀಡೆ ಬಗ್ಗೆ ಮಕ್ಕಳು ನಿರಾಸಕ್ತಿ ಹೊಂದಿದ್ದಾರೆ. ಪೋಷಕರೇ ಮಕ್ಕಳ ಜತೆ ಹೆಚ್ಚು ಕಾಲ ಕೂತು ಮೊಬೈಲ್ ಹಾಗೂ ಟಿವಿ ವೀಕ್ಷಣೆಯಲ್ಲಿ ಮಗ್ನರಾಗಿದ್ದಾರೆ. ಈ ಪ್ರವೃತ್ತಿ ಬದಲಾಗಬೇಕು. ಪಠ್ಯದ ಜತೆಗೆ ಬೇರೆ ಕ್ಷೇತ್ರಗಳ ಬಗ್ಗೆಯೂ ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು ಎಂದು ಹೇಳಿದರು.

ADVERTISEMENT

ಕ್ರೀಡೆ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಆದರೆ, ಈ ಕ್ರೀಡಾಕೂಟ ವಿಚಾರವಾಗಿ ಶಾಸಕ ಎಂಟಿಬಿ ನಾಗರಾಜು ರಾಜಕೀಯ ಮಾಡಿ
ದ್ದಾರೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳದಂತೆ ಕೆಲ ಶಾಲೆಗಳ ದೈಹಿಕ ಶಿಕ್ಷಕರನ್ನು ತಡೆದಿದ್ದಾರೆ ಎಂದು ಆರೋಪಿಸಿದರು.

93 ವರ್ಷದ ವಿ.ಎನ್.ಸಂಪತ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ 300 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.