ADVERTISEMENT

ಮಕ್ಕಳ ಅಭಿವೃದ್ಧಿಗೆ ಪ್ರತ್ಯೇಕ ಆಯೋಗ ಸ್ಥಾಪನೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2014, 19:06 IST
Last Updated 2 ಮಾರ್ಚ್ 2014, 19:06 IST

ಬೆಂಗಳೂರು: ‘ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತ್ಯೇಕ ‘ಮಕ್ಕಳ ಆಯೋಗ’ವನ್ನು ಸ್ಥಾಪಿಸ­ಬೇಕು’ ಎಂದು ಕ್ರಿಸ್ಪ್‌ ಸಂಸ್ಥೆಯ ಅಧ್ಯಕ್ಷ ಕುಮಾರ್ ಜಾಗೀರ್‌ದಾರ್‌ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತ­ನಾ­ಡಿದ ಅವರು, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯು ಮಹಿಳೆ­ಯ­ರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾತ್ರ ಯೋಜನೆಗಳನ್ನು ರೂಪಿಸು­ತ್ತಿದೆ. ಮಕ್ಕಳಿಗೆ ಯಾವುದೇ ಸೌಲಭ್ಯ­ಗಳು ಸಿಗುತ್ತಿಲ್ಲ ಎಂದು ದೂರಿದರು.

ಸರ್ವ ಶಿಕ್ಷಣ ಅಭಿಯಾನವನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿ ಶಾಲೆಗಳಲ್ಲಿ 18 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸ­ಬೇಕು. ಲೈಂಗಿಕ ಶಿಕ್ಷಣ­ವನ್ನು ಕಡ್ಡಾಯಗೊಳಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.