ADVERTISEMENT

ಮಕ್ಕಳ ಆಯೋಗಕ್ಕೆ ದೂರು ಸಲ್ಲಿಸಲು ಸೂಚನೆ

ಹುಕ್ಕಾಬಾರ್‌ಗೆ ಹೋದ ಮಕ್ಕಳ ಚಿತ್ರ ಪ್ರಕಟಣೆ ವಿವಾದ

​ಪ್ರಜಾವಾಣಿ ವಾರ್ತೆ
Published 6 ಜನವರಿ 2014, 19:55 IST
Last Updated 6 ಜನವರಿ 2014, 19:55 IST

ಬೆಂಗಳೂರು: ಹುಕ್ಕಾ ಬಾರ್‌ಗಳಿಗೆ ಹೋಗುತ್ತಿದ್ದ ಮಕ್ಕಳ ಭಾವಚಿತ್ರ ಪ್ರಕಟಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಪ್ರಕರಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ  ದೂರು ನೀಡುವಂತೆ ಅರ್ಜಿದಾರರಿಗೆ ಸೋಮವಾರ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಮಕ್ಕಳ ಭಾವಚಿತ್ರಗಳನ್ನು ಪ್ರಕಟಿಸಿದ್ದ ಮಾಧ್ಯಮಗಳ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ನ್ಯಾಯವಾದಿ ಅಂಜಲಿ ರಾಮಣ್ಣ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್‌.ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಅರ್ಜಿಯನ್ನು ಪರಿಶೀಲಿಸುವಂತೆ  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ನಿರ್ದೇಶನ ನೀಡಿತು.

ರೆಸಿಡೆನ್ಸಿ ರಸ್ತೆಯಲ್ಲಿರುವ ಹುಕ್ಕಾ ಬಾರ್‌ ಮೇಲೆ ೨೦೧೨ ಮಾರ್ಚ್ ೪ ರಂದು  ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಹುಕ್ಕಾ ಸೇದುತ್ತಿದ್ದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು  ಸಿಕ್ಕಿಬಿದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.