ADVERTISEMENT

ಮಕ್ಕಳ ನಿರಂತರ ಕಲಿಕೆಗೆ ಬೇಸಿಗೆ ಶಿಬಿರ ಪೂರಕ

​ಪ್ರಜಾವಾಣಿ ವಾರ್ತೆ
Published 3 ಮೇ 2011, 19:30 IST
Last Updated 3 ಮೇ 2011, 19:30 IST

ನೆಲಮಂಗಲ: ‘ಮಕ್ಕಳ ನಿರಂತರ ಕಲಿಕೆಗೆ ಬೇಸಿಗೆ ಶಿಬಿರಗಳು ಪೂರಕವಾಗಿವೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪರಸ್ಪರ ಸಂವಾದ ಪರಿಣಾಮಕಾರಿ ಕಲಿಕೆಗೆ ಸಹಕಾರಿ’ ಎಂದು ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ.ಸುರೇಶ್ ಆಳ್ವ ಅಭಿಪ್ರಾಯಪಟ್ಟರು.

ಸ್ಥಳೀಯ ಸುಭಾಷ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೇಸಿಗೆ ಶಿಬಿರದ ಮುಕ್ತಾಯ ಸಭೆಯಲ್ಲಿ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ‘ಪೋಷಕರು ಮಕ್ಕಳನ್ನು ಚಿಕ್ಕಂದಿನಿಂದಲೇ ಇಂದಿನ ಸ್ಪರ್ಧಾಯುಗಕ್ಕೆ ಸಜ್ಜುಗೊಳಿಸಬೇಕಾದ ಅಗತ್ಯವಿದೆ’ ಎಂದರು.

ಮುಖ್ಯ ಶಿಕ್ಷಕ ಹನುಮಂತರಾಯಪ್ಪ ಅಧ್ಯಕ್ಷತೆ ವಹಿಸಿದ್ದರು. ಪೋಷಕರ ಪರವಾಗಿ ಗೋಪಾಲ ರೆಡ್ಡಿ ಮತ್ತು ಗೋಪಾಲ್ ಮಾತನಾಡಿ, ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಬಿರಾರ್ಥಿಗಳೇ ಸಮಾರೋಪ ಕಾರ್ಯಕ್ರಮವನ್ನು ಸಂಘಟಿಸಿದ್ದು ವಿಶೇಷವಾಗಿತ್ತು. ಶಿಬಿರದಲ್ಲಿ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.