ADVERTISEMENT

ಮಕ್ಕಳ ಬೆಳವಣಿಗೆ: ಪೋಷಕರ ಪಾತ್ರ ಮುಖ್ಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2012, 19:30 IST
Last Updated 27 ಜನವರಿ 2012, 19:30 IST

ನೆಲಮಂಗಲ: `ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರಿಗಿಂತ ಮನೆಯ ವಾತಾವರಣ ಮತ್ತು ಪೋಷಕರ ಪಾತ್ರ ಮುಖ್ಯವಾಗಿರುತ್ತದೆ~ ಎಂದು ಅನುದಾನ ರಹಿತ ಶಾಲಾ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಟಿ.ಕೆ.ನರಸೇಗೌಡ ಅಭಿಪ್ರಾಯಪಟ್ಟರು. ಸ್ಥಳೀಯ ವಿಶಾಲ್ ಶಾಲೆಯಲ್ಲಿ ಏರ್ಪಡಿಸಿದ್ದ `ಪೋಷಕರ ಕ್ರೀಡಾಕೂಟ~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಶಿಕ್ಷಕ ಎ.ಟಿ.ರಾಜು, ಶಾಲೆಗಳಲ್ಲಿ ಮಕ್ಕಳಿಗಷ್ಟೇ ಅಲ್ಲದೆ ಪೋಷಕರಿಗೂ ಆದ್ಯತೆ ನೀಡಲಾಗುತ್ತಿದೆ ಮತ್ತು ಪೋಷಕರಿಗೆ ಸೂಕ್ತ ತರಬೇತಿ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

 ಪೋಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರಾದ ಚಿಕ್ಕರುದ್ರಪ್ಪ ನಿರೂಪಿಸಿ, ಶಿವಕುಮಾರ್ ಸ್ವಾಗತಿಸಿ, ನಾಗರಾಜು ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.