ADVERTISEMENT

ಮಠ ಹಸ್ತಾಂತರ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 19:30 IST
Last Updated 5 ಏಪ್ರಿಲ್ 2018, 19:30 IST

ಬೆಂಗಳೂರು: ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿರುವ ಕ್ರಮ ಪ್ರಶ್ನಿಸಿದ ರಿಟ್‌ ಅರ್ಜಿ ಮೇಲಿನ ತೀರ್ಪನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಈ ಪ್ರಕರಣದ ಸುದೀರ್ಘ ವಿಚಾರಣೆಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಮುಕ್ತಾಯಗೊಳಿಸಿತು.

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಗೋಕರ್ಣ ಕ್ಷೇತ್ರದಲ್ಲಿರುವ ಮಹಾಬಲೇಶ್ವರ ದೇವಾಲಯವನ್ನು 2008ರ ಆಗಸ್ಟ್‌ನಲ್ಲಿ ಅಂದಿನ ಬಿಜೆಪಿ ಸರ್ಕಾರವು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿತ್ತು. ಈ ಕ್ರಮವನ್ನು ಮಹಾಬಲೇಶ್ವರ ಸಂಸ್ಥಾನ ಹಾಗೂ ಬಾಲಚಂದ್ರ ವಿಘ್ನೇಶ್ವರ ದೀಕ್ಷಿತ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.