ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಶನಿವಾರ (ಏ.14) ಕೊನೆಯ ದಿನ.
ಪಾಲಿಕೆಯ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಮತಗಟ್ಟೆ ಬದಲಾವಣೆಗಾಗಿ ಅರ್ಜಿ ಸಲ್ಲಿಸಬಹುದು.
ಸಾರ್ವಜನಿಕರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.