ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಆಯ್ದ 21 ಬೆಂಗಳೂರು ಒನ್ ಕೇಂದ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ಒದಗಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಇಲ್ಲವೆ ಪಟ್ಟಿಯಿಂದ ಹೆಸರು ಕೈಬಿಡಲು ಕೋರಿ ನಮೂನೆ-6, 7, 8 ,8ಎ ಅರ್ಜಿಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸ್ವೀಕರಿಸಲಾಗುತ್ತದೆ.
ಈ ಸೇವೆಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ರಾಜಾಜಿನಗರ ವಿಧಾನಸಭಾ ಕ್ಷೇತ್ರದ 2ನೇ ಬ್ಲಾಕ್, ಬೆಂಗಳೂರು ಒನ್ ಕೇಂದ್ರದಲ್ಲಿ ಭಾನುವಾರ ಚಾಲನೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.