ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ ನಾಳೆ

ಮತಗಟ್ಟೆಗಳಲ್ಲಿ ವಿಶೇಷ ಶಿಬಿರ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 20:00 IST
Last Updated 7 ಮಾರ್ಚ್ 2014, 20:00 IST

ಬೆಂಗಳೂರು: ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಲು ಮಾ. ೯ರಂದು ನಗರದ ಎಲ್ಲ ಮತಗಟ್ಟೆಗಳಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.

ಈ ಸಂಬಂಧ ಅಗತ್ಯವಾದ ಎಲ್ಲ ಅರ್ಜಿ ನಮೂನೆಗಳನ್ನು ಕೇಂದ್ರದಲ್ಲಿ ಸಂಗ್ರಹಿಸಿಟ್ಟು ಸಾರ್ವಜನಿಕರು ನೀಡುವ ಅರ್ಜಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಹೆಸರು ಕೈಬಿಡಲು, ಸೇರ್ಪಡೆ ಮಾಡಲು ಹಾಗೂ ಅಗತ್ಯ ತಿದ್ದುಪಡಿ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಮಾರ್ಚ್ ೧೬ರ ವರೆಗೆ ಕಾಲಾವಕಾಶ ನೀಡಲಾಗಿದೆ. ಆದರೆ ಸಾರ್ವಜನಿಕರ ಅನುಕೂಲಕ್ಕಾಗಿ ಮಾ. ೯ರಂದು ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಎಲ್ಲ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.