ADVERTISEMENT

ಮಧುಮೇಹ: 23 ಜಿಲ್ಲೆಗಳಲ್ಲಿ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2012, 19:30 IST
Last Updated 18 ನವೆಂಬರ್ 2012, 19:30 IST

ಬೆಂಗಳೂರು: `ಮಧುಮೇಹ ರೋಗದ ಕುರಿತು  ಜನರಲ್ಲಿ ಜಾಗೃತಿ ಮೂಡಿಸಬೇಕು~ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಹೇಳಿದರು.

ರೋಟರಿ ಬೆಂಗಳೂರು ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಮಧುಮೇಹದ ಕುರಿತು ಜಾಗೃತಿ ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
`ಗ್ರಾಮೀಣ ಭಾಗದಲ್ಲಿಯೂ ಮಧುಮೇಹ ರೋಗವು ಕಂಡುಬರುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಈ ರೋಗದ ಬಗ್ಗೆ ಅರಿವು ಇರುವುದಿಲ್ಲ. ಇದರಿಂದ ಸರ್ಕಾರ ಗ್ರಾಮೀಣ ಮಟ್ಟದಲ್ಲಿಯೂ ಇದರ ಬಗ್ಗೆ ಅರಿವು ಮೂಡಿಸಬೇಕು~ ಎಂದರು.

`ಮಧುಮೇಹ ಬಂದ ನಂತರ ಅದನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ, ವೈದ್ಯಕೀಯ ಚಿಕಿತ್ಸೆಯಿಂದ ಅದನ್ನು ನಿಯಂತ್ರಣದಲ್ಲಿಡಬಹುದು. ಜನರಿಗೆ ವೈದ್ಯಕೀಯ ಚಿಕಿತ್ಸೆಯ ಕುರಿತು ಜಾಗೃತಿ ಮೂಡಿಸಬೇಕು~ ಎಂದು ಹೇಳಿದರು.

ರಾಜ್ಯದ 23 ಜಿಲ್ಲೆಗಳಲ್ಲಿ ಜಾಗೃತಿ ಅಭಿಯಾನವನ್ನು ಆಯೋಜಿಸಿ, 1600 ಉಚಿತ ತಪಾಸಣಾ ಶಿಬಿರಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.