ADVERTISEMENT

‘ಮನೆ ಮನೆಗೆ ಕುಮಾರಣ್ಣ’ ಹೊರಟರು

​ಪ್ರಜಾವಾಣಿ ವಾರ್ತೆ
Published 6 ಜೂನ್ 2017, 20:13 IST
Last Updated 6 ಜೂನ್ 2017, 20:13 IST
ಬೊಮ್ಮನಹಳ್ಳಿಯಲ್ಲಿ ನಡೆದ ‘ಮನೆ ಮನೆಗೆ ಕುಮಾರಣ್ಣ’ ಪಾದಯಾತ್ರೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು, ಜನಪದ ಕಲಾವಿದರು ಭಾಗವಹಿಸಿದ್ದರು
ಬೊಮ್ಮನಹಳ್ಳಿಯಲ್ಲಿ ನಡೆದ ‘ಮನೆ ಮನೆಗೆ ಕುಮಾರಣ್ಣ’ ಪಾದಯಾತ್ರೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು, ಜನಪದ ಕಲಾವಿದರು ಭಾಗವಹಿಸಿದ್ದರು   

ಬೆಂಗಳೂರು: ಜನತಾದಳ (ಜಾತ್ಯತೀತ) ನಗರ ಘಟಕದ ವತಿಯಿಂದ ಆಯೋಜಿಸಿದ್ದ ‘ಮನೆ ಮನೆಗೆ ಕುಮಾರಣ್ಣ’ ಪಾದಯಾತ್ರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬೊಮ್ಮನಹಳ್ಳಿಯಲ್ಲಿ ಮಂಗಳವಾರ ಚಾಲನೆ ನೀಡಿದರು.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ‘ಜನರು ಇದ್ದಲ್ಲಿಗೆ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸುವುದು, ಪಕ್ಷವನ್ನು ಸಂಘಟಿಸುವುದು ನಮ್ಮ ಮುಖ್ಯ ಉದ್ದೇಶ. ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರು ಅಧಿಕಾರದಲ್ಲಿದ್ದಾಗ ನಗರಕ್ಕೆ ಅವರು ಕೊಟ್ಟ ಕೊಡುಗೆ ಬಗ್ಗೆ ತಿಳಿಸಲಾಗುತ್ತದೆ’ ಎಂದು ತಿಳಿಸಿದರು.

‘ಮೊದಲ ಹಂತವಾಗಿ, ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರದಂತೆ ನಗರದ 28 ವಿಧಾನಸಭಾ ಕ್ಷೇತ್ರಗಳ 198 ಬಿಬಿಎಂಪಿ ವಾರ್ಡ್‌ಗಳಲ್ಲಿ ಪಾದಯಾತ್ರೆ ನಡೆಯಲಿದೆ.  ಜೂನ್ 15ರಂದು ರಾಜರಾಜೇಶ್ವರಿ ನಗರದಲ್ಲಿ ಅಂತ್ಯಗೊಳ್ಳಲಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.