ಬೆಂಗಳೂರು: ‘ಮರಳು ಸಾಗಣೆ ಕುರಿತು ನೂತನ ಮರಳು ನೀತಿ ಜಾರಿಗೆ ಒತ್ತಾಯಿಸಿ ಡಿ. 20ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲ ಮರಳು ಲಾರಿಮುಷ್ಕರ ನಡೆಸಲಾಗುವುದು’ ಎಂದು ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಹೇಳಿದರು.
‘ಈ ಹಿಂದೆ ಮರಳು ನೀತಿ ಜಾರಿಗೆ ಒತ್ತಾಯಿಸಿ ಮುಷ್ಕರ ನಡೆಸಿದಾಗ ಶೀಘ್ರ ನೂತನ ಮರಳು ನೀತಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ, ಇದುವರೆಗೂ ನೂತನ ಮರಳು ನೀತಿಯನ್ನು ಜಾರಿಗೊಳಿಸಿಲ್ಲ. ಆದ್ದರಿಂದ ರಾಜ್ಯದಲ್ಲಿರುವ 15 ಸಾವಿರಕ್ಕೂ ಹೆಚ್ಚು ಮರಳು ಲಾರಿಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಮರಳು ಲಾರಿಗಳಿಗೆ ರೂ 50 ಸಾವಿರದಿಂದ 70 ಸಾವಿರದವರೆಗೆ ದಂಡ ಹಾಕಲಾಗುತ್ತದೆ. ಇದುವರೆಗೂ 1,200 ಮಂದಿ ಲಾರಿ ಮಾಲೀಕರ ಮೇಲೆ ದೂರು
ದಾಖಲಿಸುವ ಮೂಲಕ ದೌರ್ಜನ್ಯ ಎಸಗಲಾಗುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.