ADVERTISEMENT

ಮರುಮೌಲ್ಯಮಾಪನ 17ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 11 ಮೇ 2018, 20:06 IST
Last Updated 11 ಮೇ 2018, 20:06 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮರು ಮೌಲ್ಯ ಮಾಪನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಇದೇ 17ರವರೆಗೆ ಮುಂದೂಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಮೊದಲು ಹೊರಡಿಸಿದ ಸುತ್ತೋಲೆ ಪ್ರಕಾರ ಮೇ 14 ಕೊನೆಯ ದಿನವಾಗಿತ್ತು.

ಮರು ಮೌಲ್ಯಮಾಪನ ಬಯಸುವ ವಿದ್ಯಾರ್ಥಿಗಳು ನಕಲು ಪ್ರತಿಯನ್ನು ಮೇ 16ರ ಒಳಗೆ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಮೇ 17ರ ಒಳಗಾಗಿ ಶುಲ್ಕ ಪಾವತಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.