ADVERTISEMENT

ಮಲ ಸ್ವಚ್ಛಗೊಳಿಸುವವರ ಸಮೀಕ್ಷೆಗೆ ಮುಂದಾದ ಪಾಲಿಕೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2012, 18:45 IST
Last Updated 16 ನವೆಂಬರ್ 2012, 18:45 IST

ಬೆಂಗಳೂರು: ಕೈಗಳಿಂದ ಮಲ ಸ್ವಚ್ಛಗೊಳಿಸುವವರು (ಮ್ಯಾನುಯಲ್ ಸ್ಕ್ಯಾವೆಂಜರ್ಸ್‌) ಮತ್ತು ಅವರ ಅವಲಂಬಿತರನ್ನು ಗುರುತಿಸುವ ಸಮೀಕ್ಷಾ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಾಗಿದೆ.

ಮ್ಯೋನ್ಯುಯಲ್ ಸ್ಕ್ಯಾವೆಂಜರ್‌ಗಳನ್ನು ಗುರುತಿಸಿ, ಅವರು ಕೈಗಳಿಂದ ಮಲ ಸ್ವಚ್ಛಗೊಳಿಸುವುದನ್ನು ತಪ್ಪಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ಈ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗಿದೆ.

`ನಿಜವಾದ ಮ್ಯೋನ್ಯುಯಲ್ ಸ್ಕ್ಯಾವೆಂಜರ್‌ಗಳನ್ನು ಗುರುತಿಸಿ ಖಾತರಿಪಡಿಸಿಕೊಳ್ಳುವುದು, ಸುಳ್ಳು ಹೇಳಿಕೆ ನೀಡಿ ನೋಂದಣಿಯಾಗಿರುವವರನ್ನು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಪಟ್ಟಿಯಿಂದ ತೆಗೆದುಹಾಕುವುದು ಮತ್ತು ಮ್ಯೋನ್ಯುಯಲ್ ಸ್ಕ್ಯಾವೆಂಜರ್‌ಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಆರೋಗ್ಯ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸುವುದು ಸಮೀಕ್ಷೆಯ ಉದ್ದೇಶವಾಗಿದೆ~ ಎಂದು ಬಿಬಿಎಂಪಿ ಆಯುಕ್ತ ರಜನೀಶ್ ಗೋಯಲ್ ತಿಳಿಸಿದ್ದಾರೆ.

`ಯಾವುದೇ ಆಧುನಿಕ ಸಲಕರಣೆಗಳಿಲ್ಲದೆ ಕೈಯಿಂದ ಮಲವನ್ನು ಸ್ವಚ್ಛಗೊಳಿಸುವ ಹಾಗೂ ಸಾಗಿಸುವ ಕೆಲಸದಲ್ಲಿ ತೊಡಗಿರುವವರನ್ನು ಮ್ಯೋನ್ಯುಯಲ್ ಸ್ಕ್ಯಾವೆಂಜರ್ಸ್‌ಗಳೆಂದು ಕರೆಯಲಾಗಿದೆ. ಮ್ಯೋನ್ಯುಯಲ್ ಸ್ಕ್ಯಾವೆಂಜರ್ಸ್‌ಗಳು ತಮ್ಮ ವ್ಯಾಪ್ತಿಯ ಬಿಬಿಎಂಪಿ ಕಚೇರಿಗಳಲ್ಲಿ ಸಮೀಕ್ಷೆಗೆ ಹೆಸರು ನೀಡಬಹುದು~ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.