
ಪ್ರಜಾವಾಣಿ ವಾರ್ತೆಬೆಂಗಳೂರು: ಕಾಳಿಕಾಮಠದ ವತಿಯಿಂದ ಏಪ್ರಿಲ್ 29 ರಂದು ಕೆಂಗೇರಿಯಲ್ಲಿ ಮಳೆ ನೀರು ಸಂಗ್ರಹ ವಿಧಾನ ಅಳವಡಿಕೆಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಠದ ಯೋಗೀಶ್ವರ ಋಷಿಕುಮಾರ ಸ್ವಾಮೀಜಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠದ ವತಿಯಿಂದ ಪ್ರಥಮವಾಗಿ ಪಕ್ಕದ ಹಳ್ಳಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಮಠಗಳು ಇಂತಹ ಕೆಲಸ ಮಾಡಬೇಕು. ರಾಷ್ಟ್ರೀಯ ಜಾಗೃತಿ ಸೇವಾ ಟ್ರಸ್ಟ್ ಇದಕ್ಕೆ ಕೈಜೋಡಿಸಿದೆ ಎಂದರು.
ಚಿತ್ರ ನಿರ್ದೇಶಕ ಓಂ ಸಾಯಿಪ್ರಕಾಶ್, ಮುಂದಿನ ಪೀಳಿಗೆಗೆ ನೀರು ಉಳಿಸುವ ನಿಟ್ಟಿನಲ್ಲಿ ಮಳೆ ನೀರು ಸಂಗ್ರಹ ವಿಧಾನವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವುದಕ್ಕೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು. ರಾಷ್ಟ್ರೀಯ ಜಾಗೃತಿ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ವೈ.ಜಿ.ನಾಗರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.