ಬೆಂಗಳೂರು: ಮಹಾದಾಯಿ ನದಿ ತಿರುವು ಯೋಜನೆಯ ವಾಸ್ತವ ಸಂಗತಿಯನ್ನು ನ್ಯಾಯಮಂಡಳಿಗೆ ತಿಳಿಸುವ ಉದ್ದೇಶದಿಂದ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ
ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ನ್ಯಾಯಮಂಡಳಿಯ ಅಧ್ಯಕ್ಷ ಜೆ.ಎಂ.ಪಾಂಚಾಲ್ ನೇತೃತ್ವದ ತಂಡ ಇದೇ 24ರವರೆಗೆ ಜಲಾನಯನ ಪ್ರದೇಶದಲ್ಲಿ ಅಧ್ಯಯನ ನಡೆಸಲಿದೆ. ತಂಡಕ್ಕೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದು, ತಂಡವನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.