ADVERTISEMENT

ಮಹಿಳಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2012, 19:30 IST
Last Updated 26 ಮಾರ್ಚ್ 2012, 19:30 IST

ಬೆಂಗಳೂರು: `ಹೆಣ್ಣು ಭ್ರೂಣಗಳ ಹತ್ಯೆ ಸಮಾಜದಲ್ಲಿ ಹೆಚ್ಚಾಗುತ್ತಿದ್ದು ಇದನ್ನು ತಡೆಯುವಲ್ಲಿ ಪ್ರತಿಯೊಬ್ಬರ ಪಾತ್ರವು ಬಹಳ ಪ್ರಮುಖವಾದುದು~ ಎಂದು ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಸುಶೀಲಮ್ಮ ಹೇಳಿದರು.

ನಗರದ ಶೇಷಾದ್ರಿಪುರ ಸಂಜೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, `ಪ್ರಸ್ತುತ ದಿನಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಮೂಲ ಕಾರಣವಾಗಿರುವ ಭ್ರೂಣ ಪತ್ತೆ ಯಂತ್ರವನ್ನು ನಿಷೇಧಿಸಬೇಕು~
`ಹೆಣ್ಣು ಸಂಸಾರದ ಕಣ್ಣಾಗಿ ತನ್ನ ಕುಟುಂಬದ ಅಭಿವೃದ್ಧಿಗೆ ಶ್ರಮಿಸುತ್ತಾಳೆ.

ಆದರೆ ಆಕೆಯನ್ನು ಸಮಾಜ ಕೀಳಾಗಿ ನೊಡುವ ಮನೋಭಾವವನ್ನು ಬೆಳೆಸಿಕೊಂಡಿರುವುದು ವಿಷಾದನೀಯ~ ಎಂದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎನ್.ಆರ್.ಪಂಡಿತರಾದ್ಯ, ಮುಖ್ಯ ಅತಿಥಿಗಳಾಗಿ ಸಹಾಯಕ ಕಾರ್ಯದರ್ಶಿಗಳಾದ ಸರೋಜ. ಕೆ.ಎಂ.ನಂಜಪ್ಪ, ಕೆ.ಎಂ.ಕೃಷ್ಣಸ್ವಾಮಿ, ಕಾಲೇಜಿನ ಆಡಳಿತ ಸಲಹಾ ಮಂಡಳಿಯ ಅಧ್ಯಕ್ಷರಾದ ಪ್ರೊ.ಸಿ.ಎಲ್. ಬಸವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.