ಯಲಹಂಕ: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಟ್ಟೂರು ವಾರ್ಡ್ ವ್ಯಾಪ್ತಿಯ ದೊಡ್ಡಬೆಟ್ಟಹಳ್ಳಿಯ
ಬಿಬಿಎಂಪಿ ಆರೋಗ್ಯ ಕೇಂದ್ರದಲ್ಲಿ ಬಿಬಿಎಂಪಿ ಮಹಿಳಾ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಬಿಬಿಎಂಪಿ ಸದಸ್ಯೆ ಡಾ.ಕೆ.ಎನ್. ಗೀತಾ ಶಶಿಕುಮಾರ್, ‘ಪೌರಕಾರ್ಮಿಕರು ಪ್ರತಿನಿತ್ಯ ನಗರವನ್ನು ಸ್ವಚ್ಛಗೊಳಿಸುವ ಮೂಲಕ ಎಲ್ಲರ ಆರೋಗ್ಯ ಕಾಪಾಡುತ್ತಾರೆ. ಆದರೆ, ಅವರು ತಮ್ಮ ಆರೋಗ್ಯದ ಕಡೆಗೆ ಗಮನಹರಿಸದೆ ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ದಿಸೆಯಲ್ಲಿ ಅವರ ಆರೋಗ್ಯ ರಕ್ಷಣೆಯ ಕಡೆಗೂ ಗಮನ ಹರಿಸಬೇಕು’ ಎಂದರು.
ಶಿಬಿರದಲ್ಲಿ ರಕ್ತದೊತ್ತಡ, ಕಣ್ಣಿನ ಪರೀಕ್ಷೆ, ಮಧುಮೇಹ ತಪಾಸಣೆ ನಡೆಸಲಾಯಿತು. 102 ಮಂದಿ ಶಿಬಿರದ ಪ್ರಯೋಜನ ಪಡೆದರು.
ಸರ್ಕಾರಿ ಆಸ್ಪತ್ರೆಯ ಸಾಮಾನ್ಯ ಕಾಯಿಲೆಗಳ ತಜ್ಞ ಡಾ.ಕುಮಾರ್, ಅಭಿಷೇಕ್ ನೇತ್ರಾಲಯದ ನೇತ್ರತಜ್ಞ ಡಾ.ಹರೀಶ್, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಗಳಾಂಬ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.