ADVERTISEMENT

ಮಹಿಳಾ ಹಕ್ಕು ರಕ್ಷಣೆಗೆ ಕರೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2012, 19:30 IST
Last Updated 16 ಫೆಬ್ರುವರಿ 2012, 19:30 IST

ನೆಲಮಂಗಲ: `ತಾಲ್ಲೂಕಿನ ಅಧಿಕಾರಿಗಳು ಮಾನವ ಹಕ್ಕುಗಳ ರಕ್ಷಕರಾಗಿ, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಬೇಕು~ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಎಸ್.ಆರ್.ನಾಯಕ್ ಕರೆಯಿತ್ತರು.

 ಸ್ಥಳೀಯ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಿಳಾ ಮೀಸಲಾತಿಯಿಂದ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳ ಪರವಾಗಿ ವಾಸ್ತವವಾಗಿ ಪುರುಷರೇ ಅಧಿಕಾರ ನಡೆಸುತ್ತಿರುವುದು ಶೋಚನಿಯವಾಗಿದೆ ಎಂದರು.

 `ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ಶೌಚಾಲಯಗಳಿಲ್ಲದೆ ಬೆಳಗಾಗುವ ಮುನ್ನ ಕತ್ತಲಾದ ನಂತರ ನಿಸರ್ಗ ಕ್ರಿಯೆ ಪೂರೈಸುವ ದುಸ್ಥಿತಿ ಇದೆ. ಅದನ್ನು ತಪ್ಪಿಸಬೇಕು~ ಎಂದು ಅವರು ಹೇಳಿದರು.
ಮೊರಾರ್ಜಿ ಶಾಲೆಗೆ ಪ್ರವೇಶ: 2012-13ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 6ನೇ ತರಗತಿ ವ್ಯಾಸಂಗ ಮಾಡಲಿರುವ ವಿದ್ಯಾರ್ಥಿಗಳಿಂದ ಅರ್ಜಿ  ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ನಾಲ್ಕು ಭಾವಚಿತ್ರ, ಜಾತಿ ಮತ್ತು ಆದಾಯ ಪತ್ರ ಲಗತ್ತಿಸಿ ಫೆ.25ರೊಳಗೆ ಸಲ್ಲಿಸಿ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸಿ.ಎನ್.ಅಶ್ವತ್ಥನಾರಾಯಣ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.