ADVERTISEMENT

ಮಹಿಳೆಯರ ಏಳಿಗೆಗೆ ವಿವಿಧ ಯೋಜನೆ ಜಾರಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2011, 19:30 IST
Last Updated 3 ಮಾರ್ಚ್ 2011, 19:30 IST

ರಾಜರಾಜೇಶ್ವರಿನಗರ:  ‘ಮಹಿಳೆಯರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು  ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಹೇಳಿದರು. ಉತ್ತರಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಹಾಗೂ ಸೀರೆ ವಿತರಿಸಿ ಮಾತನಾಡಿ ಅವರು, ಮಹಿಳೆಯರು ಸ್ವಾಲಂಬಿತರಾಗಬೇಕು. ಹಾಗೆಯೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಗಮನ ಹರಿಸಬೇಕು ಎಂದರು. ಪಾಲಿಕೆ ಸದಸ್ಯ ರಮೇಶ್‌ರಾಜು, ಹನುಮಗಿರಿ ದೇವಾಲಯಗಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆಂಜನಪ್ಪ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.