ADVERTISEMENT

‘ಮಹಿಳೆಯರ ದೂರುಗಳಿಗೆ ಸ್ಪಂದಿಸದ ಪೊಲೀಸರು’

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2018, 19:30 IST
Last Updated 9 ಮಾರ್ಚ್ 2018, 19:30 IST

ಬೆಂಗಳೂರು: ‘ಮಹಿಳೆಯರು ಸಲ್ಲಿಸುವ ದೂರುಗಳಿಗೆ ನಗರದ ಪೊಲೀಸರು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಬೇಸರ ವ್ಯಕ್ತಪಡಿಸಿದರು.

ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೈಬರ್ ಕ್ರೈಂ, ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಆಯೋಗಕ್ಕೆ ಬೆಂಗಳೂರಿನಿಂದ ಹೆಚ್ಚು ದೂರುಗಳು ಬರುತ್ತಿವೆ. ಅವುಗಳ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಪ್ರಯೋಜನವಾಗುತ್ತಿಲ್ಲ’ ಎಂದರು.

‘ಠಾಣೆಗಳಲ್ಲಿ ಉತ್ತಮ ವಾತಾವರಣವಿಲ್ಲ. ದೂರು ನೀಡಲೆಂದು ಸಂತ್ರಸ್ತರು ಠಾಣೆಗೆ ಹೋದರೆ, ಸಿಬ್ಬಂದಿ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.