ADVERTISEMENT

ಮಹಿಳೆಯರ ದೌರ್ಜನ್ಯಕ್ಕೆ ಕಡಿವಾಣ ಹಾಕಿ

​ಪ್ರಜಾವಾಣಿ ವಾರ್ತೆ
Published 7 ಮೇ 2012, 19:30 IST
Last Updated 7 ಮೇ 2012, 19:30 IST

ಬೆಂಗಳೂರು: `ನೊಂದವರಿಗೆ ನೆರವು ನೀಡುತ್ತಿರುವ ರೋಟರಿ ಕ್ಲಬ್ ಮಹಿಳೆಯರ ಹಕ್ಕಿನ ಉಲ್ಲಂಘನೆಯಂತಹ ಸೂಕ್ಷ್ಮ ವಿಚಾರಗಳ ಬಗ್ಗೆಯೂ ಗಮನ ಹರಿಸಬೇಕು. ಈ ಬಗ್ಗೆ ಚರ್ಚಿಸಿ ಸಲಹೆ ಪಡೆದುಕೊಳ್ಳಬಹುದು~ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಹೇಳಿದರು.

ಬೆಂಗಳೂರು ರೋಟರಿ ಕ್ಲಬ್ ಸೋಮವಾರ ಆಯೋಜಿಸಿದ್ದ ಸರ್ಕಾರೇತರ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.`ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ರೋಟರಿ ಕ್ಲಬ್ ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಸಮಸ್ಯೆಗಳು, ಮಕ್ಕಳ ದೌರ್ಜನ್ಯ ಪ್ರಕರಣಗಳಿಗೂ ಕಡಿವಾಣ ಹಾಕಬೇಕಿದೆ. ಈ ಕ್ಷೇತ್ರದಲ್ಲಿ ರೋಟರಿಯ ನೆರವಿನ ಅಗತ್ಯವಿದೆ~ ಎಂದು  ಹೇಳಿದರು.

`ಸಾಥಿ~ `ಮೆಡಿಕೊಪ್ಯಾಸ್ಟಿ ಅಸೋಸಿಯನ್~  ಸರ್ಕಾರೇತರ ಸಂಸ್ಥೆಗಳ  ಪ್ರಮೋದ್ ಕುಲಕರ್ಣಿ, ಡಾ.ಅಜಿತ್ ಬಿಳೆ ಅವರನ್ನು ಸನ್ಮಾನಿಸಲಾಯಿತು. ಕ್ಲಬ್‌ನ ಅಧ್ಯಕ್ಷ ಎನ್.ಎಸ್.ಶ್ರೀನಿವಾಸ ಮೂರ್ತಿ, ಟಿ.ವಿ.ರಘುನಾಥ್, ಸುಕೇನ್ ಪದ್ಮನಾಭ ಇತರರು ಉಪಸ್ಥಿತರಿದ್ದರು.
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.