ADVERTISEMENT

ಮಹಿಳೆಯರ ರಕ್ಷಣೆಗೆ ‘ಓಬವ್ವ ಪಡೆ’

​ಪ್ರಜಾವಾಣಿ ವಾರ್ತೆ
Published 24 ಮೇ 2018, 19:25 IST
Last Updated 24 ಮೇ 2018, 19:25 IST
ಓಬವ್ವ ಪಡೆಯ ಮಹಿಳಾ ಸಿಬ್ಬಂದಿ, ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಗಸ್ತು ತಿರುಗಿದರು
ಓಬವ್ವ ಪಡೆಯ ಮಹಿಳಾ ಸಿಬ್ಬಂದಿ, ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಗಸ್ತು ತಿರುಗಿದರು   

ಬೆಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಹಾಗೂ ಅವರಿಗೆ ರಕ್ಷಣೆ ಒದಗಿಸಲೆಂದೇ ಪಶ್ಚಿಮ ವಿಭಾಗದ ಪೊಲೀಸರು, ‘ಓಬವ್ವ ಪಡೆ’ ಹುಟ್ಟುಹಾಕಿದ್ದಾರೆ. ಉಪ್ಪಾರಪೇಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಈ ಪಡೆ ಕೆಲಸ ಆರಂಭಿಸಿದೆ.

ಮೆಜೆಸ್ಟಿಕ್ ಬಸ್ ನಿಲ್ದಾಣ, ಮೆಟ್ರೊ ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುರುವಾರ ಪಡೆಯ ಸಿಬ್ಬಂದಿ ಗಸ್ತು ತಿರುಗಿದರು. ಕಪ್ಪು ಬಣ್ಣದ ಶರ್ಟ್, ಸೈನಿಕರ ಮಾದರಿಯ ಪ್ಯಾಂಟ್ ಹಾಗೂ ಕ್ಯಾಪ್‌ ಧರಿಸಿದ್ದ ಮಹಿಳಾ ಕಾನ್‌ಸ್ಟೆಬಲ್‌ಗಳು, ಲಾಠಿ ಹಿಡಿದು ಸದ್ದು ಮಾಡಿದರು.

‌ಯುವತಿಯರನ್ನು ಚುಡಾಯಿಸುವ, ದೌರ್ಜನ್ಯವೆಸಗುವರ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಕೋರಿದರು. ಅಂಥ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯಲಾಗುವುದು ಎಂದು ಭರವಸೆ ನೀಡಿದರು. ಸದ್ಯ ಈ ಪಡೆಯಲ್ಲಿ ಮಹಿಳಾ ಪಿಎಸ್‌ಐ ಸೇರಿದಂತೆ ಎಂಟು ಮಹಿಳಾ ಸಿಬ್ಬಂದಿ ಇದ್ದಾರೆ. ಅವರೆಲ್ಲರೂ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ನಿರಂತರವಾಗಿ ಗಸ್ತು ತಿರುಗಲಿದ್ದಾರೆ.

ADVERTISEMENT

ಪಡೆಯ ಕೆಲಸದ ಬಗ್ಗೆ ಟ್ವೀಟ್‌ ಮಾಡಿರುವ ಡಿಸಿಪಿ ರವಿ ಚನ್ನಣ್ಣನವರ, 'ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಮತ್ತು ಮಹಿಳೆಯರ ಸುರಕ್ಷತೆಗಾಗಿ ಈ ವಿಶೇಷ ಮಹಿಳಾ ಪೊಲೀಸ್ ಪಡೆ ರಚಿಸಿದ್ದೇವೆ' ಎಂದಿದ್ದಾರೆ.

‘ಮಹಿಳೆಯರು ಅಪಾಯಕ್ಕೆ ಸಿಲುಕಿದ್ದ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪಡೆಯ ಸಿಬ್ಬಂದಿ ಸ್ಥಳಕ್ಕೆ ಹೋಗಲಿದ್ದಾರೆ. ಈ ಪಡೆಗೆ ಉತ್ತಮ ಸ್ಪಂದನೆ ವ್ಯಕ್ತವಾದರೆ, ಉಳಿದ ಠಾಣೆಗಳ ವ್ಯಾಪ್ತಿಗೂ ವಿಸ್ತರಿಸಲಿದ್ದೇವೆ’ ಎಂದು ಹೇಳಿದ್ದಾರೆ.‌


ತುರ್ತು ಸಂದರ್ಭಗಳಲ್ಲಿ 100ಕ್ಕೆ ಕರೆ ಮಾಡಿ

ಮೆಜೆಸ್ಟಿಕ್ ಬಸ್ ನಿಲ್ದಾಣ, ಮೆಟ್ರೊ ನಿಲ್ದಾಣ, ಸುತ್ತಮುತ್ತಲ ಪ್ರದೇಶಗಳಲ್ಲಿ ಗಸ್ತು

ಮಹಿಳಾ ಪಿಎಸ್‌ಐ ಸೇರಿದಂತೆ ಎಂಟು ಮಹಿಳಾ ಸಿಬ್ಬಂದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.