ADVERTISEMENT

ಮಾಜಿ ಸಭಾಧ್ಯಕ್ಷ ಎಂ.ವಿ.ವೆಂಕಟಪ್ಪ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 24 ಜೂನ್ 2013, 19:54 IST
Last Updated 24 ಜೂನ್ 2013, 19:54 IST

ಬೆಂಗಳೂರು: ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಎಂ.ವಿ.ವೆಂಕಟಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ತಮ್ಮ ನಿವಾಸದಲ್ಲಿ ಇತ್ತೀಚೆಗೆ ಬಾಗಿಲು ತೆಗೆಯಲು ಹೋಗಿ ಜಾರಿ ಬಿದ್ದಿದ್ದ ಅವರಿಗೆ ತಲೆಗೆ ತೀವ್ರ ಪೆಟ್ಟಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸೋಮವಾರ ಸಂಜೆ ನಂತರ ಮಾತು ನಿಂತಿತು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರ ಪುತ್ರ ರಾಜೀವ್ ಗೌಡ `ಪ್ರಜಾವಾಣಿ'ಗೆ ತಿಳಿಸಿದರು.

ಅವಾಂತರ: ವೆಂಕಟಪ್ಪ ಬದುಕಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂತಾಪ ಸೂಚನೆಯ ಸಂದೇಶವನ್ನು ವಾರ್ತಾ ಇಲಾಖೆ ಮಾಧ್ಯಮಗಳಿಗೆ ಇ-ಮೇಲ್ ಮೂಲಕ ಕಳುಹಿಸಿ, ಅವಾಂತರ ಸೃಷ್ಟಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.