ADVERTISEMENT

ಮಾದರಿ ಶಾಲೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2012, 18:30 IST
Last Updated 23 ಆಗಸ್ಟ್ 2012, 18:30 IST

ಕೃಷ್ಣರಾಜಪುರ: 1.60 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಎ.ನಾರಾಯಣಪುರ ಬಂಡೆ ಪ್ರದೇಶದ ಸರ್ಕಾರಿ ಮಾದರಿ ಶಾಲಾ ಕಟ್ಟಡವನ್ನು ಶಾಸಕ ಎನ್.ಎಸ್.ನಂದೀಶ ರೆಡ್ಡಿ ಇತ್ತೀಚೆಗೆ ಉದ್ಘಾಟಿಸಿದರು.

ಬಳಿಕ ಅವರು ಮಾತನಾಡಿ, `ಈ ಹಿಂದೆ ಹಳೆಯ ಕಟ್ಟಡದಲ್ಲಿ ಶಾಲೆಯನ್ನು ನಡೆಸಲಾಗುತ್ತಿತ್ತು. ಅಲ್ಲಿ ಯಾವುದೇ ಸೌಲಭ್ಯಗಳು ಇಲ್ಲ ಎಂದು ನಿವಾಸಿಗಳು ದೂರಿದ್ದ ಹಿನ್ನೆಲೆಯಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಕಟ್ಟಡದಲ್ಲಿ 16 ಕೊಠಡಿಗಳಿದ್ದು, ನಾಲ್ಕು ಶೌಚಾಲಯಗಳಿವೆ. ಇಲ್ಲಿ ಎಂಟನೇ ತರಗತಿವರೆಗೆ ಕಲಿಕೆಗೆ ಅವಕಾಶ ಇದೆ. ಎಲ್ಲ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ~ ಎಂದರು.

ಇದೇ ಸಂದರ್ಭದಲ್ಲಿ 5.90 ಕೋಟಿ ರೂಪಾಯಿ ವೆಚ್ಚದಲ್ಲಿ ಎ.ನಾರಾಯಣಪುರದ 35 ಬಡಾವಣೆಗಳ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಸ್.ಎಸ್.ಪ್ರಸಾದ್, ಪಾಲಿಕೆ ಸದಸ್ಯ ಸುಕುಮಾರ್, ಶ್ರೀನಿವಾಸ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.