ಬೆಂಗಳೂರು: `ಮಾಹಿತಿ ಸಂಸ್ಕರಣಾ ವಿಚಾರದಲ್ಲಿ ಉತ್ತಮ ಸಂಶೋಧನಾ ಕಾರ್ಯ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಇಂತಹ ಸಮ್ಮೇಳನಗಳು ಸಹಕಾರಿ~ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ವೇಣುಗೋಪಾಲ್ ತಿಳಿಸಿದರು.
ಮಾಹಿತಿ ಸಂಸ್ಕೃರಣಾ ಸಮಾಜವು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಹಿತಿ ಸಂಸ್ಕರಣಾ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡಿದರು.`ಮನುಷ್ಯ ಮತ್ತು ಯಂತ್ರಗಳ ನಡುವೆ ಅಂತರವನ್ನು ಕಡಿಮೆಗೊಳಿಸಲು ಕಾರ್ಯತತ್ಪರರಾಗುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಸಮಾವೇಶಗಳು ಕೈಗೆಟುಕುವಂತೆ ಮಾಡಬೇಕಿರುವುದು ಕೂಡ ವಿಶ್ವವಿದ್ಯಾಲಯದ ಆದ್ಯ ಕರ್ತವ್ಯ~ ಎಂದು ತಿಳಿಸಿದರು.
ಎಐಸಿಟಿಇ ವಿಶ್ರಾಂತ ಅಧ್ಯಕ್ಷ ಪ್ರೊ.ಆರ್.ನಟರಾಜನ್, `ಈ ರೀತಿಯ ಸಮಾವೇಶಗಳಿಂದ ದೇಶದಲ್ಲಿ ಶೈಕ್ಷಣಿಕ ಸಂಶೋಧನಾ ಕ್ಷೇತ್ರ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ. ಇದರೊಂದಿಗೆ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ~ ಎಂದು ಅಭಿಪ್ರಾಯಪಟ್ಟರು.
ಭಾರತೀಯ ತಾಂತ್ರಿಕ ಶಿಕ್ಷಣ ಸಮಾಜದ ಅಧ್ಯಕ್ಷ ಎನ್.ಆರ್.ಶೆಟ್ಟಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.