ADVERTISEMENT

ಮಿತ್ತಲ್ ರೈಲ್ವೆ ಸುರಕ್ಷತಾ ಆಯುಕ್ತ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 19:45 IST
Last Updated 16 ಸೆಪ್ಟೆಂಬರ್ 2011, 19:45 IST

ಬೆಂಗಳೂರು: ದಕ್ಷಿಣ ವಲಯ ರೈಲ್ವೆ ಸುರಕ್ಷತಾ ಆಯುಕ್ತರಾಗಿ (ಸಿಆರ್‌ಎಸ್) ಎಸ್.ಕೆ.ಮಿತ್ತಲ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು. ದಕ್ಷಿಣ ವಲಯ ರೈಲ್ವೆ, ನೈರುತ್ಯ ರೈಲ್ವೆ ಹಾಗೂ ಬೆಂಗಳೂರು ಮೆಟ್ರೊ ರೈಲ್ವೆ ಸುರಕ್ಷತೆಯ ಜವಾಬ್ದಾರಿಯನ್ನು ಇವರು ನಿರ್ವಹಿಸಲಿದ್ದಾರೆ.

ಪಂಜಾಬ್ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರ್ ಪದವಿ ಪಡೆದಿರುವ ಇವರು ಭಾರತೀಯ ರೈಲ್ವೆ ಎಂಜಿನಿಯರ್‌ಗಳ ಸೇವೆಗೆ 1980ರಲ್ಲಿ ಸೇರ್ಪಡೆಯಾದರು. ಸಂಬಲಾಪುರದಲ್ಲಿ ಹೆಚ್ಚುವರಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ ಇವರು ದಕ್ಷಿಣ ಕೇಂದ್ರೀಯ ರೈಲ್ವೆಯ ನಿರ್ಮಾಣ ವಿಭಾಗದಲ್ಲಿ ಮುಖ್ಯ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದರು. ಜೈಪುರದಲ್ಲಿ ಮುಖ್ಯ ಹಳಿ ಎಂಜಿನಿಯರ್ ಆಗಿಯೂ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

ದಕ್ಷಿಣ ವಲಯ ರೈಲ್ವೆ ಸುರಕ್ಷತಾ ಆಯುಕ್ತ ದಿನೇಶ್ ಕುಮಾರ್ ಸಿಂಗ್ ಅವರು ಮಿತ್ತಲ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.