ADVERTISEMENT

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 20:00 IST
Last Updated 7 ಮಾರ್ಚ್ 2014, 20:00 IST

ಬೆಂಗಳೂರು: ‘ರಾಜ್ಯದಲ್ಲಿ ಪರಿಶಿಷ್ಟ ಪಂಗ­ಡಕ್ಕೆ ನೀಡಲಾಗುತ್ತಿರುವ ಮೀಸ­ಲಾತಿ­ಯನ್ನು ಶೇ 7.5ಕ್ಕೆ ಹೆಚ್ಚಿಸಬೇಕು’ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಎಂ.ನರಸಿಂಹಯ್ಯ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾ­ಗೋಷ್ಠಿಯಲ್ಲಿ ಮಾತನಾಡಿ, ಸದ್ಯ ಪರಿಶಿಷ್ಟ ಪಂಗಡಕ್ಕೆ ಶೇ 3ರಷ್ಟು ಮೀಸ­ಲಾತಿ ನೀಡಲಾಗುತ್ತಿದೆ. ಇದನ್ನು ಶೇ 7.5ಕ್ಕೆ ಹೆಚ್ಚಿಸಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ 50 ಜಾತಿ ಮತ್ತು ಉಪಜಾತಿ­ಗಳನ್ನು ಸೇರಿಸಲು ತೀರ್ಮಾನ ತೆಗೆದು­ಕೊಂಡಿದೆ. ಮೀಸಲಾತಿ ಪ್ರಮಾಣವನ್ನು ಹೆಚ್ಚಿಸದೆ ಹೊಸ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಈಗಾಗಲೆ ಸಾಮಾಜಿಕ ನ್ಯಾಯದಿಂದ ವಂಚಿತ­ವಾಗಿರುವ ಪ.ಪಂಗಡಕ್ಕೆ ಅನ್ಯಾಯ­ವಾಗುತ್ತದೆ. ಆದ್ದರಿಂದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದರು.

ರಾಜ್ಯದಲ್ಲಿ 60 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಜನರಿದ್ದಾರೆ. ಹೀಗಿದ್ದರೂ ಕಾಂಗ್ರೆಸ್‌ ಸರ್ಕಾರವು  ಸಮುದಾಯಕ್ಕೆ ಒಂದು ಸಚಿವ ಸ್ಥಾನ­ವನ್ನು ನೀಡಿದೆ. ಸಮುದಾಯದ ಶಾಸಕ­ರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ­ಮಾನ ನೀಡದಿದ್ದರೆ  ರಾಜ್ಯದಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.