ADVERTISEMENT

ಮುಖ್ಯಮಂತ್ರಿ ವಿಶೇಷಾಧಿಕಾರಿಯಾಗಿ ಪ್ರಸನ್ನ ನೇಮಕ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ಬೆಂಗಳೂರು: ನಿವೃತ್ತ ಕೆ.ಎ.ಎಸ್ ಅಧಿಕಾರಿ ಡಾ.ಎ.ವಿ. ಪ್ರಸನ್ನ ಅವರನ್ನು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿಯನ್ನಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ.

ದಿವಂಗತ ಡಾ.ವಿ.ಎಸ್.ಆಚಾರ್ಯ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಪ್ರಸನ್ನ ಅವರೇ ಆಪ್ತ ಕಾರ್ಯದರ್ಶಿ ಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಸರ್ಕಾರದ ಮುಂದಿನ ಆದೇಶದವರೆಗೂ ಅಥವಾ ಈ ಮುಖ್ಯಮಂತ್ರಿ ಯ ಅವಧಿ ಪೂರ್ಣವಾಗುವವರೆಗೂ ಪ್ರಸನ್ನ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.