ADVERTISEMENT

ಮುಷ್ಕರ ಬೆಂಬಲಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2016, 20:21 IST
Last Updated 9 ಆಗಸ್ಟ್ 2016, 20:21 IST
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರು ಪ್ರತಿಭಟನಾ ರ್‍ಯಾಲಿ ನಡೆಸಿದರು   –ಪ್ರಜಾವಾಣಿ ಚಿತ್ರ
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರು ಪ್ರತಿಭಟನಾ ರ್‍ಯಾಲಿ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಸೆಪ್ಟೆಂಬರ್ 2ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಮಂಗಳವಾರ ಪ್ರತಿಭಟನಾ ಸಮಾವೇಶ  ನಡೆಸಿತು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೆರವಣಿಗೆಯಲ್ಲಿ  ಬಂದ ನೂರಾರು ಜನರು,  ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿದರು.
ಈ ವೇಳೆ, ಸಿಐಟಿಯು, ಎಐಟಿಯುಸಿ, ಐಎನ್‌ಟಿಯುಸಿ, ಎಚ್‌ಎಂಎಸ್‌ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

‘ಸರ್ಕಾರಗಳು ಕಾರ್ಮಿಕ ಪರ ಕಾಯ್ದೆಗಳನ್ನು ಗಂಭೀರವಾಗಿ ಅನುಷ್ಠಾನ ಮಾಡಬೇಕು. ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ  ಒದಗಿಸಿ, ಅವರಿಗೆ ಪಿಂಚಣಿ ನೀಡಬೇಕು’  ಎಂದು ಒತ್ತಾಯಿಸಿದರು.

‘ಕೇಂದ್ರದ ಮೋದಿ ಸರ್ಕಾರವು ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ’ ಎಂದು ದೂರಿದ ಮುಖಂಡರು, ‘ಸರ್ಕಾರವು ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ಕೂಡಲೇ ನಿಲ್ಲಿಸಬೇಕು. ತಿಂಗಳ ಕನಿಷ್ಠ ಕೂಲಿಯನ್ನು ₹ 18 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.