ADVERTISEMENT

ಮೂಲಸೌಲಭ್ಯ ಅಭಿವೃದ್ಧಿಗೆ ಕ್ರಮ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 8 ಜೂನ್ 2011, 19:30 IST
Last Updated 8 ಜೂನ್ 2011, 19:30 IST

ಬೆಂಗಳೂರು: ರಾಜ್ಯದ ನ್ಯಾಯಾಲಯಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಕಾನೂನು, ಹಣಕಾಸು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಗೃಹ ಕಚೇರಿ `ಕೃಷ್ಣಾ~ದಲ್ಲಿ ಬುಧವಾರ ಸಭೆ ನಡೆ ಸಿದ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.

ಹೈಕೋರ್ಟ್ ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರು, ವಕೀಲರು ಮತ್ತು ಕಕ್ಷಿದಾರರ ಸಂಖ್ಯೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಪಡಿಸುವ ಕುರಿತು ಚರ್ಚೆ ನಡೆಸಸಲು ಸಭೆ ಕರೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.