ಬೆಂಗಳೂರು: ನಗರದ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣದ ಸುತ್ತಮುತ್ತ ಶನಿವಾರ ಮತ್ತು ಭಾನುವಾರ ಪ್ರಯಾಣಿಕರು ಮತ್ತು ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ು ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವ್ಯವಸ್ಥೆಯಲ್ಲಿ ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ.
ಧನ್ವಂತರಿ ರಸ್ತೆ, ಫ್ಲಾಟ್‌ಫಾರ್ಮ್ ರಸ್ತೆ ಮತ್ತು ಖೋಡೆ ಜಂಕ್ಷನ್‌ನಲ್ಲಿ ಎಲ್ಲ ರೀತಿಯ ಖಾಸಗಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಮಡಿಕೇರಿ, ಮೈಸೂರು ಮತ್ತು ಕೇರಳ ಕಡೆ ಹೋಗುವ ಬಸ್‌ಗಳು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮತ್ತು ತಮಿಳುನಾಡಿನ ಕಡೆ ಸಂಚರಿಸುವ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ.
ಬಾಳೇಕಾಯಿ ಮಂಡಿ, ಜಕ್ಕರಾಯನಕೆರೆ ಸಮೀಪ, ಎನ್‌ಜಿಇಎಫ್ಮತ್ತು ನ್ಯೂ ಪೀಣ್ಯ ಬಸ್ ನಿಲ್ದಾಣದ ಸಮೀಪ ಬಸ್ ನಿಲುಗಡೆ ನಿಬರ್ಂಧಿಸಲಾಗಿದೆ.
`ನಗರದಿಂದ ಬೇರೆ ಊರುಗಳಿಗೆ ಹೋಗುವ ಸಾರ್ವಜನಿಕರು ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣಕ್ಕೆ ಹೋಗಲು ಬಿಎಂಟಿಸಿ ಬಸ್ ಅಥವಾ ಆಟೊ ರಿಕ್ಷಾ ಬಳಸಿ. ಮೈಸೂರು ಕಡೆ ಹೋಗುವವರ ಮೈಸೂರು ರಸ್ತೆಯ ಉಪಗ್ರಹ ಬಸ್‌ನಿಲ್ದಾಣದ ಮೂಲಕ ಪ್ರಯಾಣಿಸಿ. ಕೆಂಪೇಗೌಡ ರಸ್ತೆ, ಗೂಡ್ಸ್‌ಶೆಡ್ ರಸ್ತೆ, ಶೇಷಾದ್ರಿ ರಸ್ತೆ, ಕೃಷ್ಣ ಫ್ಲೋರ್‌ಮಿಲ್ ರಸ್ತೆ, ಫ್ಲಾಟ್‌ಫಾರ್ಮ್ ರಸ್ತೆ, ಸುಬೇದಾರ್ ಛತ್ರ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಆದ್ದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.