ADVERTISEMENT

ಮೇಯರ್ ಆಯ್ಕೆಗೆ ಸಮಿತಿ: ಅಶೋಕ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ.

ಹತ್ತರಿಂದ ಹನ್ನೆರಡು ಮಂದಿ ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದು, ಸಮಿತಿಯೇ ಹೆಸರನ್ನು ಅಂತಿಮಗೊಳಿಸಲಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಆರ್. ಅಶೋಕ ಹೇಳಿದರು.

`ಬೆಂಗಳೂರು ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ಸುಬ್ಬನರಸಿಂಹ, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಶಾಸಕರಾದ ಬಿ.ಎನ್.ವಿಜಯಕುಮಾರ್, ಎಸ್. ರಘು, ಎಂ.ಸತೀಶ್ ರೆಡ್ಡಿ ಮತ್ತು ಮಾಜಿ ಮೇಯರ್ ಎಸ್.ಕೆ.ನಟರಾಜ್ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿ ಏ. 28ರೊಳಗೆ ಹೆಸರೊಂದನ್ನು ಶಿಫಾರಸು ಮಾಡಲಿದೆ~ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.