ಬೆಂಗಳೂರು: ಒಳಚರಂಡಿಗಳನ್ನು ಸ್ವಚ್ಛಗೊಳಿಸಲು ಬಳಸುವ ಮ್ಯಾನ್‌ಹೋಲ್‌ಗಳ ಬದಲು ಚಿಕ್ಕದಾದ `ಪೈಪ್‌ಹೋಲ್~ಗಳನ್ನು ಬಳಕೆಗೆ ತರುವ ಚಿಂತನೆ ಸರ್ಕಾರದ ಮಟ್ಟದಲ್ಲಿ ಆರಂಭವಾಗಿದೆ. ಸರ್ಕಾರಿ ಕಾಮಗಾರಿಗಳ ಗುಣಮಟ್ಟ ಖಾತರಿ ಕಾರ್ಯಪಡೆ ಸಲ್ಲಿಸಿರುವ ವರದಿಯಲ್ಲಿ ಈ ಕುರಿತು ಶಿಫಾರಸು ಮಾಡಲಾಗಿದೆ.
`ಒಳಚರಂಡಿಗಳಲ್ಲಿ ಕಸ ಕಟ್ಟಿಕೊಂಡಾಗ, ಕಾರ್ಮಿಕರಿಗೆ ಚರಂಡಿ ಸ್ವಚ್ಛಗೊಳಿಸಲು ಮ್ಯಾನ್‌ಹೋಲ್‌ಗಳ ಅವಶ್ಯಕತೆ ಇದೆ. ಆದರೆ ಈಗ ಯಂತ್ರಗಳ ಸಹಾಯದಿಂದ ಒಳಚರಂಡಿಯನ್ನು ಸ್ವಚ್ಛಗೊಳಿಸುವ ತಂತ್ರಜ್ಞಾನ ಲಭ್ಯವಿದೆ.
ಹಾಗಾಗಿ ಮ್ಯಾನ್‌ಹೋಲ್‌ಗಳ ಅವಶ್ಯಕತೆ ಇಲ್ಲ~ ಎಂದು ಕಾರ್ಯಪಡೆಯ ಸದಸ್ಯ ಕಾರ್ಯದರ್ಶಿ ಐ. ರವೀಂದ್ರನಾಥ್ `ಪ್ರಜಾವಾಣಿ~ಗೆ ತಿಳಿಸಿದರು. ಕೆಲವು ಆಯ್ದ ಪ್ರದೇಶಗಳಲ್ಲಿ ಈ ಮ್ಯಾನ್‌ಹೋಲ್‌ಗಳ ಬದಲು ಪೈಪ್‌ಹೋಲ್‌ಗಳನ್ನು ಅಳವಡಿಸುವಂತೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕಾರ್ಯಪಡೆಗೆ ಇತ್ತೀಚೆಗೆ ಸೂಚನೆ ನೀಡಿದ್ದಾರೆ. ಈ ಕಾರ್ಯಕ್ಕೆ ಬಿಡಬ್ಲ್ಯುಎಸ್‌ಎಸ್‌ಬಿ ಸಹಕಾರ ಪಡೆಯುವಂತೆಯೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.