ADVERTISEMENT

ಯಡಿಯೂರಪ್ಪಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 18:30 IST
Last Updated 16 ಸೆಪ್ಟೆಂಬರ್ 2011, 18:30 IST

ಬೆಂಗಳೂರು: ಕೊಪ್ಪಳ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹಣ ಹಂಚಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ರಾತ್ರಿ ನೋಟಿಸ್ ಜಾರಿ ಮಾಡಿದೆ.

ಯಡಿಯೂರಪ್ಪ ಇತ್ತೀಚೆಗೆ ಕೊಪ್ಪಳದಲ್ಲಿ ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಒಂದು ಸಾವಿರ ರೂಪಾಯಿ ಹಣ ನೀಡಿದ ದೃಶ್ಯವನ್ನು ಚುನಾವಣಾ ಆಯೋಗ ನೇಮಿಸಿದ್ದ ಛಾಯಾಗ್ರಾಹಕರು ಸೆರೆ ಹಿಡಿದಿದ್ದರು. ಸೆ.18ರೊಳಗೆ ವಿವರಣೆ ನೀಡುವಂತೆ ಆಯೋಗವು ಅವರಿಗೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.