ADVERTISEMENT

ಯಡಿಯೂರಪ್ಪ- ರಾಜನಾಥ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 19:35 IST
Last Updated 2 ಫೆಬ್ರುವರಿ 2011, 19:35 IST

ಬೆಂಗಳೂರು: ಬುಧವಾರ ಸಂಜೆ ನಗರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಘಟಕದ ಮಾಜಿ ಅಧ್ಯಕ್ಷ ರಾಜನಾಥ ಸಿಂಗ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಎರಡು ದಿನಗಳಿಂದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಇದ್ದ ಯಡಿಯೂರಪ್ಪ ಬುಧವಾರ ರಾತ್ರಿ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮೈಸೂರಿನ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಬಳಿಕ ಅವರು   ಗುರುವಾರ ನವದೆಹಲಿಗೆ ಹಿಂತಿರುಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.