ADVERTISEMENT

ಯಾದವರಿಗೆ ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 19:45 IST
Last Updated 10 ಮಾರ್ಚ್ 2018, 19:45 IST

ಬೆಂಗಳೂರು: ರಾಜ್ಯದಲ್ಲಿ ಯಾದವಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಹೀಗಾಗಿ ರಾಜಕೀಯ ಪಕ್ಷಗಳು ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ಯಾದವ ಮಹಾಸಭಾ ಒತ್ತಾಯಿಸಿದೆ.

ಶನಿವಾರ ಇಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಅಧ್ಯಕ್ಷ ಪಿ.ಗಾದೆಪ್ಪ, ‘ರಾಜ್ಯದಲ್ಲಿ ಸುಮಾರು 35 ಲಕ್ಷ ಮಂದಿ ಯಾದವರು ಇದ್ದಾರೆ. ಆದರೆ, ಸಮಸ್ಯೆ ಹೇಳಿಕೊಳ್ಳಲು ನಮ್ಮ ಸಮುದಾಯದ ರಾಜಕೀಯ ಪ್ರತಿನಿಧಿ ಇಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಯಾದವ ಸಮಾಜದ ಒಳ ಪಂಗಡವಾದ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಗೊಲ್ಲ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.