ADVERTISEMENT

ಯುನಾನಿ ವೈದ್ಯರ ನೋಂದಣಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2012, 19:30 IST
Last Updated 16 ಏಪ್ರಿಲ್ 2012, 19:30 IST

ಬೆಂಗಳೂರು: ವಂಶ ಪಾರಂಪರಿಕ ವೈದ್ಯರಿಗೆ ಆಯುರ್ವೇದ, ಯುನಾನಿ ವೈದ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ವಂಶ ಪಾರಂಪರಿಕ ವೈದ್ಯರ ಪರಿಷತ್ತಿನ ಅಧ್ಯಕ್ಷ ವೈ.ಎಚ್.ವಜೀರ್ ಅಹಮದ್ ಒತ್ತಾಯಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ, ದೂರದ ಹಳ್ಳಿಗಾಡಿನಲ್ಲಿ ಅನೇಕ ದಶಕಗಳಿಂದ ನಿರಂತರವಾಗಿ ಕಡು ಬಡವರಿಗೆ ಆರೋಗ್ಯ ರಕ್ಷಣೆ ನೀಡುತ್ತಿರುವವರು ನಾವು ಮಾತ್ರ. ಅವರಿಗೆ ಈ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.