ADVERTISEMENT

ಯುವಕನ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2011, 19:30 IST
Last Updated 6 ಏಪ್ರಿಲ್ 2011, 19:30 IST

ಬೆಂಗಳೂರು: ಯುವತಿಯರಿಗೆ ಚುಡಾಯಿಸುತ್ತಿದ್ದ ಯುವಕನ ಮೇಲೆ ಬಾಲಕನೊಬ್ಬ ಹಲ್ಲೆ ನಡೆಸಿರುವ ಘಟನೆ ಮಡಿವಾಳದ ಮದೀನಾ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಬೈಕ್ ಮೆಕಾನಿಕ್ ಅಫ್ಜರ್ (19) ಹಲ್ಲೆಗೊಳಗಾದವನು. ಆರೋಪಿ, ಹದಿನೇಳು ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮದೀನಾ ನಗರದ ಮಸೀದಿ ಬಳಿ ಕೂರುತ್ತಿದ್ದ ಅಫ್ಜರ್ ಮತ್ತು ಆತನ ಗೆಳೆಯರು ಯುವತಿಯರನ್ನು ಚುಡಾಯಿಸುತ್ತಿದ್ದರು.

ಇದನ್ನು ಪ್ರಶ್ನಿಸಿದ ಬಾಲಕನಿಗೆ ಅಫ್ಜರ್ ಥಳಿಸಿದ. ಇದರಿಂದ ಆಕ್ರೋಶಗೊಂಡ ಆತ ಕಬ್ಬಿಣದ ಸಲಾಕೆಯಿಂದ ಹೊಡೆದಾಗ ಅಫ್ಜರ್ ಗಾಯಗೊಂಡ. ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗ್ನೇಯ ವಿಭಾಗದ ಡಿಸಿಪಿ ಡಾ.ಪಿ.ಎಸ್.ಹರ್ಷ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಡಿವಾಳ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.